ಮನ ತಟ್ಟಿದ ಮಹಿಳೆಯರ ಕೆಚ್ಚು

 

“ಪ್ರಶಸ್ತಿ ಗೆದ್ದ ಬಳಿಕ ಟಿಎಸ್‌ಐಗೆ ಕಾಸರವಳ್ಳಿ ನೀಡಿದ ಸಂದರ್ಶನದ ಆಯ್ದಭಾಗ
ಈ ಪ್ರಶಸ್ತಿಯನ್ನು ನೀವು ನಿರೀಕ್ಷಿಸಿದ್ದಿರಾ?
ಸಿನಿಮಾ ಮಾಡಿದಾಗ ಅದು ಚೆನ್ನಾಗಿದೆಯೋ ಅಥವಾ ಕೆಟ್ಟದಾಗಿದೆಯೋ ನನಗೆ ಗೊತ್ತಾಗುವುದಿಲ್ಲ. ಚಿತ್ರ ವೀಕ್ಷಿಸಿದ ಬಳಿಕ ಕೆಲವರು ಅಸಮಾಧಾನ ವ್ಯಕ್ತಪಡಿಸಿದರೂ, ಇನ್ನು ಕೆಲವರು ಅತ್ಯದ್ಭುತವಾಗಿದೆ ಎಂದು ಬೆನ್ನು ತಟ್ಟಿದರು. ಪ್ರಕಾಶ್ ಬೆಳವಾಡಿ, ಜಿ.ಎಸ್. ಭಾಸ್ಕರ್ ಮತ್ತು ಪಿ. ಶೇಷಾದ್ರಿ ಅವರು ಸೇರಿದಂತೆ ಕೆಲವರು ಚಿತ್ರದ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದರು. ಆ ನಂತರ ಚಲನಚಿತ್ರೋತ್ಸವಗಳಿಗೂ ನಾನು ಈ ಚಿತ್ರವನ್ನು ಕಳುಹಿಸಿದೆ. ಖ್ಯಾತ ವಿಮರ್ಶಕರಾದ ವಿದ್ಯಾರ್ಥಿ ಚಟರ್ಜಿ, ಪ್ರಸನ್ನ ರಾಮಸ್ವಾಮಿ ಅವರು ಹಲವು ವರ್ಷಗಳ ನಂತರ ಅತ್ಯದ್ಭುತ ಚಿತ್ರ ನೀಡಿದ್ದೀರಿ ಎಂದು ಶ್ಲಾಘಿಸಿದರು. ಮೊದಲ ಸ್ಕ್ರೀನಿಂಗ್ ನೋಡಿದ ನಂತರ ಕೆಲವು ಪ್ರೇಕ್ಷಕರಿಂದ ಇವತ್ತಿನ ಸಂದರ್ಭಕ್ಕೆ ಚಿತ್ರ ಯೋಗ್ಯವಾಗಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಯಿತು. ಅಂದೇ ಉಮಾಶ್ರೀ ಅವರಿಗೆ ಪ್ರಶಸ್ತಿ ಬರಬಹುದೇನೋ ಅಂದುಕೊಂಡೆ. ಕರಾವಳಿ ಪ್ರದೇಶದಲ್ಲಿ ಚಿತ್ರ ಮಾಡುವಾಗ ಎಂತಹ ಸವಾಲಿತ್ತು? ನಿಜ ಹೇಳಬೇಕೆಂದ್ರೆ ನಮಗೆ ಕರಾವಳಿ ಪ್ರದೇಶದ ಬಗ್ಗೆ ಹೆಚ್ಚಿನ ಪರಿಚಯ ಇರಲಿಲ್ಲ. ಇಂತಹ ಸಂದರ್ಭದಲ್ಲೂ ಪರಿಸ್ಥಿತಿಗೆ ಹೊಂದಿಕೊಂಡು ಚಿತ್ರ ಮಾಡುವುದು ಸವಾಲೇ ಆಗಿತ್ತು. ‘ಗುಲಾಬಿ’ ಪಾತ್ರಕ್ಕೆ ಉಮಾಶ್ರೀ ಅವರ ಆಯ್ಕೆಗೆ ಕಾರಣ? ನಮ್ಮಲ್ಲಿ ಕೆಲವರು ಉಮಾಶ್ರೀ ಅವರು ಕೇವಲ ಕಾಮಿಡಿ ಪಾತ್ರಕ್ಕೆ ಮಾತ್ರ ಯೋಗ್ಯರು ಎಂದು ಅವರ ಹಿನ್ನೆಲೆ ತಿಳಿಯದೆ ವಾದಿಸುತ್ತಾರೆ. ಒಳ್ಳೆ ಪಾತ್ರ ಮಾಡಿಕೊಂಡು ಬಂದಿದ್ದರೂ ಚಿತ್ರದಲ್ಲಿ ಕೆಟ್ಟದಾಗಿ ತೋರಿಸಿದ್ದರೆ ಅದು ನಿರ್ದೇಶಕನ ತಪ್ಪು. ನಾನು ಮೊದಲು ನೋಡುವುದೇನೆಂದರೆ ಭಾವನೆಯನ್ನು ಹೊರ ಚೆಲ್ಲಬಹುದಾದ ಮುಖಲಕ್ಷಣ ಹಾಗೂ ಬಾಡಿ ಲಾಂಗ್ವೇಜ್. ಜೊತೆಗೆ ರಂಗಭೂಮಿ ಹಿನ್ನೆಲೆ ಹಾಗೂ ಪಾತ್ರ ನಿಭಾಯಿಸುವ ಚಾಕಚಕ್ಯತೆ ಕೂಡ ಉಮಾಶ್ರೀ ಅವರಲ್ಲಿತ್ತು.
ಚಿತ್ರ ಸಂಪೂರ್ಣವಾಗಿ ‘ಕುಂದಗನ್ನಡ’ ಭಾಷೆಯಲ್ಲಿದೆ. ಕಲಾವಿದರಿಗೆ ಈ ಭಾಷೆ ಮೊದಲೇ ತಿಳಿದಿತ್ತೇ?
ಚಿತ್ರದಲ್ಲಿ ನಾಲ್ಕು ನಟರು ಬಿಟ್ಟರೆ ಉಳಿದವರು ಕುಂದಾಪುರದವರೇ. ಎಂ.ಡಿ. ಪಲ್ಲವಿ ಅವರು ನೇತ್ರುವಿನ ಪಾತ್ರದಲ್ಲಿದ್ದರೆ, ಕೆ.ಜಿ. ಕೃಷ್ಣಮೂರ್ತಿ ಅವರು ಗುಲಾಬಿ ಗಂಡನ ಪಾತ್ರ ನಿರ್ವಹಿಸಿದ್ದಾರೆ. ನಮ್ಮ ಕೆಲಸ ಸುಲಭವಾಗಲು ಭಂಡಾರ್ಕ್ಸರ್ ಕಾಲೇಜಿನ ಹುಡುಗಿಯೊಬ್ಬಳೂ ಸಹಾಯ ಮಾಡಿದಳು. ಸಂಭಾಷಣೆ ಯಾವ ರೀತಿ ಇರಬೇಕು ಎಂಬ ಬಗ್ಗೆ ಆಕೆ ನಟರಿಗೆ ಸತತವಾಗಿ ಹೇಳಿಕೊಡುತ್ತಿದ್ದಳು. ಇನ್ನು ಡಬ್ಬಿಂಗ್ ಸಮಯದಲ್ಲಿ ನಟ ರಘು ಪಾಂಡೇಶ್ವರ್ ಕೂಡ ಯಾವ ರೀತಿಯಲ್ಲಿ ಮಾತನಾಡಬೇಕೆಂದು ತಿಳಿಹೇಳುತ್ತಿದ್ದರು. ಇಲ್ಲಿ ಒಂದು ಮಾತ್ರ ಸ್ಪಷ್ಟ. ಭಾಷೆ ಬಗ್ಗೆ ಎಚ್ಚರ ಇದ್ದವರು ಯಾವುದೇ ಭಾಷೆಯನ್ನು ಕೂಡ ಬೇಗ ಕಲಿಯುತ್ತಾರೆ. ಎಚ್ಚರ ಇಲ್ಲದಿದ್ದರೆ ಕೊನೆಯವರಿಗೂ ಅದನ್ನು ಕಲಿಯಲು ಸಾಧ್ಯವಾಗುವುದಿಲ್ಲ. ಒಟ್ಟಾರೆ ‘ಇಗೋ’ ಬಿಟ್ಟು ನಿಜ ಪರಿಶ್ರಮ ಹಾಕಿದರೆ ಯಶಸ್ಸು ಸಾಧ್ಯ.
‘ಗುಲಾಬಿ ಟಾಕೀಸ್’ಗೆ ಪ್ರೇರಣೆ…?
2006ರ ಓಸಿಯನ್ ಚಲನಚಿತ್ರೋತ್ಸವದಲ್ಲಿ ನನ್ನ ‘ನಾಯಿ ನೆರಳು’ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಸಂದರ್ಭದಲ್ಲಿ ನಾನು ಹೊರಗಿನ ಲಾಬಿಯಲ್ಲಿ ಕುಳಿತಿದ್ದೆ. ಹೀಗೆ ಯೋಚಿಸುತ್ತಿದ್ದಾಗ ಥಟ್ಟನೆ ಮೀನುಗಾರರ ಸಮಸ್ಯೆ ಬಗ್ಗೆ ಚಿತ್ರ ಮಾಡಬೇಕೆಂದು ಲೆಕ್ಕಹಾಕಿದೆ. ‘ಇಮೇಜ್ ಮೇಕಿಂಗ್’ ಹೇಗೆ ನಮ್ಮಲ್ಲಿ ಪೂರ್ವಸಿದ್ಧವಾದ ನಂಬಿಕೆ ಹಾಗೂ ಅನಿಸಿಕೆಗಳನ್ನು ಹುಟ್ಟುಹಾಕುತ್ತವೆ ಎಂಬುದನ್ನು ತೋರಿಸುವ ಉದ್ದೇಶದಿಂದ ‘ಗುಲಾಬಿ ಟಾಕೀಸ್’ನ್ನು ಮಾಡುವ ಕೆಲಸಕ್ಕೆ ಕೈಹಾಕಿದೆ.
ನಿಮ್ಮ ಹೆಚ್ಚಿನ ಎಲ್ಲಾ` ಚಿತ್ರಗಳಂತೆ ಇದೂ ಸ್ತ್ರೀ ಪ್ರಧಾನ ಚಿತ್ರ…. ಇದಕ್ಕೆ ನಿರ್ದಿಷ್ಟ ಕಾರಣವೇನಾದರು ಇದೆಯೇ?
ನಿರ್ದಿಷ್ಟ ಕಾರಣ ಅಂತ ಹೇಳುವುದು ಕಷ್ಟ. ಅವರ ತಾಳ್ಮೆಯ ಶಕ್ತಿ, ಸಮಸ್ಯೆ ನಿರ್ವಹಿಸುವ ರೀತಿ, ಸೋಲಬಾರದು ಅನ್ನೋ ಒತ್ತಾಸೆಯಿಂದ ಅವರು ಗೆಲ್ಲುತ್ತಾ ಸಾಗುವುದು ನನಗೆ ಇಷ್ಟವಾಗುತ್ತವೆ. ಗುಲಾಬಿಯೂ ಹಾಗೇ. ಊರಿನಿಂದ ಆಕೆಯನ್ನು ಹೊರದಬ್ಬಿದರೂ, ‘ಎಲ್ಲಿಯ ತನಕ ಹೆಂಗಸರು ಬಸಿರಾಗುತ್ತಾರೋ ಅಲ್ಲಿಯತನಕ ನನ್ನ ಸೂಲಗಿತ್ತಿಯ ಕೆಲಸಕ್ಕೆ ದಕ್ಕೆ ಬಾರದು. ನಾನು ಹೆದರೋದಿಲ್ಲ, ಬೇರೆ ಕಡೆ ಹೋಗಿ ನನ್ನ ಕೆಲಸ ಮಾಡಿ ಬದುಕುತ್ತೇನೆ’ ಎಂದು ಧೈರ್ಯದಿಂದ ನುಡಿಯುತ್ತಾಳೆ. ಈ ಕೆಚ್ಚು ನನ್ನ ಮನ ತಟ್ಟಿತು.
ಕೃಪೆ: ದ ಸಂಡೇ ಇಂಡಿಯನ್ 
Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: